Select Your Language

Notifications

webdunia
webdunia
webdunia
webdunia

ಜೈಲಿಗೆ ಹೋಗಿ ಬಂದವರಿಗೆ ಅಧಿಕಾರ ನೀಡಬೇಡಿ– ಸಿದ್ದರಾಮಯ್ಯ

ಸಿದ್ದರಾಮಯ್ಯ
ಜೈಲಿಗೆ ಹೋಗಿ ಬಂದವರಿಗೆ ಅಧಿಕಾರ ನೀಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಸಾಗರ ನಗರದಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಬಹಳಷ್ಟು ನಾಯಕರು ಜೈಲಿಗೆ ಹೋಗಿ ಬಂದಿದ್ದಾರೆ. ಆದ್ದರಿಂದ ಅಂತಹವರಿಗೆ ಅಧಿಕಾರ ನೀಡಬೇಡಿ ಎಂದು ತಿಳಿಸಿದ್ದಾರೆ.
 
ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಕರ್ನಾಟಕದ ಇತಿಹಾಸದಲ್ಲಿ ಮುಖ್ಯಮಂತ್ರಿ ಜೈಲಿಗೆ ಹೋಗಿದ್ದು ಎಂದರೆ ಬಿಜೆಪಿಯ ಮುಖ್ಯಮಂತ್ರಿ ಮಾತ್ರ. ಅಧಿಕಾರದಲ್ಲಿದ್ದಾಗ ರಾಜ‌್ಯವನ್ನು ಲೂಟಿ ಮಾಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪರಿವರ್ತನಾ ಯಾತ್ರೆಗೆ ಗೈರಾದ ಶಾಸಕ ಆನಂದ ಸಿಂಗ್‌