ಈ ವಿಚಾರವನ್ನು ಪತ್ರದ ಮೂಲಕ ತಿಳಿಸಿರುವ ಅವರು, ಚುನಾವಣಾ ಪ್ರಕ್ರಿಯೆ ಸೇರಿದಂತೆ ಹಲವು ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಪಾಠಗಳು ಸರಿಯಾಗಿ ಸಮಯಕ್ಕೆ ಮುಗಿಯುತ್ತಿಲ್ಲ. ಶಿಕ್ಷಕರಿಗೆ ಶಾಲಾ ಚಟುವಟಿಕೆಗಳಿಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಆದಕಾರಣ ಚುನಾವಣಾ ಕೆಲಸಗಳಿಗೆ ಶಿಕ್ಷಕರನ್ನು ಬಳಸಬೇಡಿ ಎಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಹಿಂದಿನಿಂದಲೂ ಚುನಾವಣಾ ಕೆಲಸಗಳಿಗೆ ಶಿಕ್ಷಕರನ್ನು ನೇಮಿಸಲಾಗುತ್ತಿತ್ತು. ಆದರೆ ಇದರಿಂದ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ ಎಂದು ಮನಗೊಂಡ ಸಚಿವರು ಈ ಕೆಲಸದಿಂದ ಶಿಕ್ಷಕರನ್ನು ವಿಮುಕ್ತಗೊಳಿಸುವಂತೆ ಆಯೋಗಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.