ಮಹಾದಾಯಿ ಮತ್ತು ಕಳಸಾ–ಬಂಡೂರಿ ಯೋಜನೆ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಮಾತುಕತೆಗೆ ಸಿದ್ದರಾಗಿದ್ದು, ಬಿಜೆಪಿ ಜೊತೆಗೆ ಕಾಂಗ್ರೆಸ್ ಕೂಡ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇದರಲ್ಲಿ ಓಟ್ ಬ್ಯಾಂಕ್ ರಾಜಕಾರಣ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿವಾದ ಬಗೆಹರಿಸಲು ಬಿಜೆಪಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್ ಕೂಡ ಈ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕಿದೆ ಎಂದು ತಿಳಿಸಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮದ ಸಮಿತಿ ಸರ್ಕಾರ ಪ್ರಾಯೋಜಿತ ಕಮಿಟಿಯಾಗಿದ್ದು, ಇದು ಸರ್ಕಾರ ಹೇಗೆ ಹೇಳುತ್ತದೆಯೋ ಅದರಂತೆ ವರದಿ ನೀಡುತ್ತದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಸಮಾಜ ಒಡೆಯುವ ಕೆಲಸವನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಕುಮಾರಸ್ವಾಮಿ ಮುಖ್ಯಮಂತ್ರಿ ಇದ್ದಾಗ ಸಂಪುಟದಲ್ಲಿ ವಿಷಯ ಪ್ರಸ್ತಾಪಿಸಲು ಬಿಟ್ಟಿರಲಿಲ್ಲ. ಯೋಜನೆಯ ಶಂಕು ಸ್ಥಾಪನೆಗೂ ಬಂದಿರಲಿಲ್ಲ. ಈಗ ಟೀಕೆ ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.