ಬೆಂಗಳೂರು : ಐಟಿ ದಾಳಿಯ ವೇಳೆ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಅವರ ನಿವಾಸದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸ, ಕಚೇರಿ, ಆಪ್ತರ ಮನೆ, ತುಮಕೂರು ನಗರದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆ ಪರಮೇಶ್ವರ್ ಅವರ ಸದಾಶಿವನಗರ ನಿವಾಸದಲ್ಲಿಯೇ 70 ಲಕ್ಷ ರೂ. ನಗದು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಲ್ಲದೇ ಪರಮೇಶ್ವರ್ ಅವರಿಗೆ ಸಂಬಂಧಿಸಿದ್ದ ಒಟ್ಟು 4.5 ಕೋಟಿ ರೂ. ನಗದು ಅಧಿಕಾರಿಗಳ ಕೈಗೆ ಸಿಕ್ಕಿದ್ದು, ಇನ್ನೂ ಎರಡು ದಿನ ಐಟಿ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.