ಬೆಂಗಳೂರು : ದೇಶದಾದ್ಯಂತ ಹೊಸ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು, ಇದರಿಂದ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಪೊಲೀಸರು ಭಾರೀ ದಂಡ ವಿಧಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನಕ್ಕೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ 2,978 ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ವಾಹನ ಸವಾರರಿಂದ ಬರೋಬರಿ ಸುಮಾರು 30 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ ಎನ್ನಲಾಗಿದೆ.
ಈ ಟ್ರಾಫಿಕ್ ನಿಯಮದಿಂದ ತತ್ತರಿಸಿದ ವಾಹನ ಸವಾರರು ಪೊಲೀಸರ ಪರಿಶೀಲನೆ ಕಂಡು ಬಂದ ಸ್ಥಳಗಳಲ್ಲಿ ಬೈಕ್‍ಗಳನ್ನು ತಳ್ಳಿಕೊಂಡು ಹೋಗುತ್ತಿದ್ದು, ಇದಕ್ಕೆ ಸಂಬಂಧ ಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.