ಬೆಂಗಳೂರು : ರಾಜ್ಯದಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ.
ಇಂದು ಕೂಡ ಈ ಮುಷ್ಕರ ಮುಂದುವರಿದಿದ್ದು, ಜನರು ಬಸ್ ಗಳಿಲ್ಲದೆ ಪರದಾಡುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರಿದ ಹಿನ್ನಲೆಯಲ್ಲಿ ನಿನ್ನೆ ಒಂದೇ ದಿನ NEKRTC ಗೆ 40 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಮುಲ್ಲಾ ಮಾಹಿತಿ ನೀಡಿದ್ದಾರೆ.