Webdunia - Bharat's app for daily news and videos

Install App

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಹೇಗೆ ಕೊಲೆಯಾದಳು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಾ…

Webdunia
ಬುಧವಾರ, 1 ಆಗಸ್ಟ್ 2018 (21:22 IST)
ಎಸ್ ಎಸ್ ಎಲ್ ಸಿ ಓದುತ್ತಿದ್ದ 15 ವರ್ಷದ ಬಾಲಕಿಯನ್ನು ಅಪಹರಿಸಿ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯಲ್ಲಿ  ಅಪ್ರಾಪ್ತ ಬಾಲಕಿಯ ಬರ್ಬರ ಕೊಲೆಯಾಗಿದೆ.

ಬಾಲಕಿಯೊಬ್ಬಳನ್ನು ಅಪರಿಚಿತ ಯುವಕರು ಕಲ್ಲಿನಿಂದ ಜಜ್ಜಿ ಅಮಾನುಷವಾಗಿ ಕೊಲೆಗೈದಿರುವ ಘಟನೆಯು ಮಾಲೂರು ಪಟ್ಟಣದಲ್ಲಿ ನಡೆದಿದೆ.

ಶಾಲೆ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಮೃತಪಟ್ಟ ಬಾಲಕಿಯನ್ನು ರೈಲ್ವೇ ನಿಲ್ದಾಣದ ಸಮೀಪ ಇರುವ ಇಂದಿರಾನಗರದ ರಕ್ಷಿತಾ(15) ಎಂದು ಗುರುತಿಸಲಾಗಿದೆ. ಪಟ್ಟಣದ ರೈಲ್ವೇ ನಿಲ್ದಾಣದ ಸಮೀಪ ಇರುವ ಬಾಲಗಂಗಾರನಾಥ ವಿದ್ಯಾಸಂಸ್ಥೆಯ 10 ನೇ ತರಗತಿಯಲ್ಲಿ ರಕ್ಷಿತಾ ವ್ಯಾಸಂಗ ಮಾಡುತ್ತಿದ್ದಳು. ಎಂದಿನಂತೆ   ಶಾಲೆಯಿಂದ ಸಂಜೆ ಮನೆಗೆ ಹೋಗುತ್ತಿರುವ ಸಮಯದಲ್ಲಿ ಕೆಲ ಯುವಕರು ಬಾಲಕಿಯನ್ನು ಅಡ್ಡಗಟ್ಟಿ ಕಲ್ಲಿನಿಂದ ತಲೆಗೆ ಹೊಡೆದಿದ್ದಾರೆ. ಇದರಿಂದ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ರಕ್ಷಿತಾ ಮೃತಪಟ್ಟಿರುವ ಬಗ್ಗೆ ವಿಷಯ ತಿಳಿದ ಪೋಷಕರು, ಸಂಬಂಧಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಇದರಿಂದ ಮಾಲೂರು ಹೊಸೂರು ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಕೂಡಲೇ ಪಟ್ಟಣದ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತಪಟ್ಟ ಬಾಲಕಿಯನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದರು. ಬಾಲಕಿಯನ್ನು ಕೊಂದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಆಸ್ಪತ್ರೆಯ ಮುಂಭಾಗದಲ್ಲಿ ಕರವೇ, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೋಲಿಸ್ ಬಂದೋಬಸ್ತ್ ಮಾಡಿದ್ದಾರೆ. ಬಾಲಕಿಯ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸುವ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments