ವಿಜಯಪುರ : ಶಾಸಕ ದೇವಾನಂದ ಚವ್ಹಾಣ ಅವರು ತಡರಾತ್ರಿಯವರೆಗೂ ಕಾದು ಕುಳಿತು ಜಿಲ್ಲೆಯಲ್ಲಿ ಅಕ್ರಮ ಮರಳು ತುಂಬಿಕೊಂಡು ಹೋಗುತ್ತಿದ್ದ ವಾಹನಗಳನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಭಯವಿಲ್ಲದೆ ಜಿಲ್ಲೆಯಲ್ಲಿ ಅಕ್ರಮ ಮರಳು ಮಾಫಿಯಾ ನಡೆಯುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಮಾಹಿತಿ ಪಡೆದ ಶಾಸಕ ದೇವಾನಂದ ಚವ್ಹಾಣ ಅವರು ಈ ಮಾಫಿಯಾಕ್ಕೆ ಬ್ರೇಕ್ ಹಾಕಲು ಸೋಮವಾರ ತಡರಾತ್ರಿ ನಾಗಠಾಣ ಮತಕ್ಷೇತ್ರದಲ್ಲಿ ಕಾದು ಕುಳಿತು ಮರಳು ತುಂಬಿಕೊಂಡು ಹೋಗುತ್ತಿದ್ದ ವಾಹನಗಳನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಘಟನೆಯಲ್ಲಿ ಚಾಲಕ ಪರಾರಿಯಾಗಿದ್ದು, ಸದ್ಯ ವಿಜಯಪುರ ಗ್ರಾಮೀಣ ಪೊಲೀಸರು ಮರಳು ವಾಹನ ಜಪ್ತಿ ಮಾಡಿ ವಶಕ್ಕೆ ಪಡೆದಿದ್ದಾರೆ. ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಬಾರೀ ಮೆಚ್ಚುಗೆ ವ್ಯಕ್ತವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.