ನವದೆಹಲಿ : ಭಾರತದಲ್ಲಿ ಏರುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪರಿಹಾರವೊಂದನ್ನು ಸೂಚಿಸಿದ್ದಾರೆ.
ಸಂಸತ್ ನಲ್ಲಿ ಈ ಬಗ್ಗೆ ಮಾತನಾಡಿದ ಸಚಿವ ಗಿರಿರಾಜ್ ಸಿಂಗ್, ‘ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮತದಾನದ ಹಕ್ಕು ನೀಡಬಾರದು. ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೆರುವಂತಿಲ್ಲ ಎಂಬ ಕಾನೂನು ತರಬೇಕು’ ಎಂದು ಸಲಹೆ ನೀಡಿದ್ದಾರೆ.
ಸಚಿವರ ಈ ಹೇಳಿಕೆಗೆ ಬಾರೀ ವಿರೋಧ ವ್ಯಕ್ತವಾಗಿದ್ದು, ಈಗಲೇ ಚುನಾವಣೆಯಲ್ಲಿ ಮತದಾನ ಮಾಡುವವರ ಪ್ರಮಾಣ ಕಡಿಮೆಯಾಗಿದೆ. ಇನ್ನು, ಇಬ್ಬರಿಗಿಂತ ಹೆಚ್ಚು ಮಕ್ಕಳಿರುವವರು ಮತ ಚಲಾಯಿಸುವಂತಿಲ್ಲ ಎಂಬ ಕಾನೂನು ತಂದರೆ ಮತದಾನದ ಪ್ರಮಾಣ ಇನ್ನೂ ಕಡಿಮೆಯಾಗಲಿದೆ ಎಂದು ಹಲವರು ಟೀಕಿಸಿದ್ದಾರೆ.