Publish Date: Fri, 14 Sep 2018 (19:57 IST)
Updated Date: Fri, 14 Sep 2018 (19:59 IST)
ಭಾರತೀಯ ಜನತಾ ಪಕ್ಷದವರು ನಿರಂತರವಾಗಿ ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರವನ್ನು ಉರುಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಾವೇನೂ ಸುಮ್ಮನೆ ಕುಳಿತಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸರಕಾರವನ್ನು ಉಳಿಸಿಕೊಳ್ಳಲು ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.
ಸರಕಾರ ಕೆಡವಲು ಬಿಜೆಪಿಯವರು ಯಾರಿಗೆ ಮುಂಗಡ ಎಷ್ಟು ಹಣ ಕೊಟ್ಟಿದ್ದಾರೆ ಎಂಬ ಲೆಕ್ಕ ಇದೆ. ಎಲ್ಲ ಸಾಕ್ಷಿಗಳನ್ನು ಸಿದ್ಧಪಡಿಸಲಾಗುತ್ತಿದೆ. ನನಗೂ ಏನೆಲ್ಲ ಮಾಡಬೇಕು ಎಂಬುದು ಗೊತ್ತಿದೆ ಎಂದಿದ್ದಾರೆ.
ಬಿಜೆಪಿಯವರು ರೆಸಾರ್ಟನಲ್ಲಾದರೂ ರಾಜಕಾರಣ ಮಾಡಲಿ, ಮತ್ತೆಲ್ಲೋ ಗುಡಿಸಲಿನಲ್ಲಿ ಮಾಡಲಿ ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದು ಸಿಎಂ ಗರಂ ಆಗಿಯೇ ತಿರುಗೇಟು ನೀಡಿದ್ದಾರೆ.