Publish Date: Thu, 04 Jan 2018 (11:31 IST)
Updated Date: Thu, 04 Jan 2018 (11:37 IST)
ಬೆಂಗಳೂರು : ಸಿ.ಎಂ. ಸಿದ್ದರಾಮಯ್ಯ ಅವರು ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ- ಐಜಿಪಿ ಅವರಿಂದ ಮಾಹಿತಿಗಳನ್ನು ಪಡೆದು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸೂಚನೆ ನೀಡಿದ್ದಾರೆ.
ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಗಲಾಟೆಗಳು ನಡೆಯುತ್ತಿದ್ದು ಸಿಎಂ ವಿರುದ್ಧ ಆರೋಪಗಳು ಕೇಳಿಬರುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರು ಡಿಜಿ- ಐಜಿಪಿ ಅವರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ. ಹಾಗೆ ಗಲಾಟೆಗೆ ಕುಮ್ಮಕ್ಕು ಕೊಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದು, ಗಲಾಟೆ ಮಾಡುವವರನ್ನು ಬಂಧಿಸಿ ದೂರು ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ