ಬೆಂಗಳೂರು : ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ಧಿ ಕೇಳಿಬಂದಿತ್ತು.
ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರ ಸುಳ್ಳು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಾನು ನಿರ್ವಹಿಸಿಕೊಂಡು ಹೋಗುತ್ತಿದ್ದೇನೆ. ಈ ಸುದ್ದಿಯನ್ನ ಯಾರು ಸೃಷ್ಟಿ ಮಾಡಿದ್ದಾರೋ, ಎಲ್ಲಿಂದ ಹುಟ್ಟಿದೆಯೋ ನನಗೆ ಗೊತ್ತಿಲ್ಲ. ಇದಕ್ಕೆ ಕಾರಣಕರ್ತರು ಯಾರೆಂದು ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಎಲ್ಲರೊಂದಿಗೆ ಒಗ್ಗಟಿನಿಂದ ಹೊಗಬೇಕಿದೆ. ನಾನು ಹೈಕಮಾಂಡ್ಗೆ ಈವರೆಗೂ ಯಾವುದೇ ಪತ್ರ ಬರೆದಿಲ್ಲ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಮುನ್ನಡೆಸಿಕೊಂಡು ಹೊಗುತ್ತಿದ್ದೇನೆ. ನನ್ನನ್ನು ಮುಂದುವರಿಸುವುದು ಬಿಡುವುದು ಪಕ್ಷದ ವರಿಷ್ಠಗೆ ಬಿಟ್ಟ ವಿಚಾರ ಎಂದು ಅವರು ತಿಳಿಸಿದ್ದಾರೆ.