ರಾಜ್ಯದ ಸಮ್ಮಿಶ್ರ ಸರಕಾರದ ಮುಂದೆ ಸಿಬಿಐಗೆ ನಿರ್ಬಂಧ ಹೇರುವ ಕುರಿತು ಯಾವುದೇ ವಿಚಾರ ಇಲ್ಲ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.
ಸಿಬಿಐಗೆ ನಿರ್ಬಂಧ ಹೇರುವ ಚಿಂತನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿಬಿಐ ಮುಕ್ತ ಪ್ರವೇಶ ಹಾಗೂ ತನಿಖೆ ಮಾಡುವುದಕ್ಕೆ ನಿರ್ಬಂಧ ಹೇರುವ ಪರಿಸ್ಥಿತಿ ಸದ್ಯಕ್ಕೆ ಇಲ್ಲ. ಈಗಿನ ಸನ್ನಿವೇಶದಲ್ಲಿ ಸಿಬಿಐ ನಿರ್ಬಂಧಿಸುವ ಚರ್ಚೆ ನಡೆಯುತ್ತಿಲ್ಲ ಎಂದಿದ್ದಾರೆ.
ಬಿಜೆಪಿ ನೇತೃತ್ವದ ಎನ್.ಡಿ. ಎ. ಮೈತ್ರಿಕೂಟದಿಂದ ಹೊರಬಂದಿರುವ ಚಂದ್ರಬಾಬು ನಾಯ್ಡು ಆಂಧ್ರಕ್ಕೆ ಸಿಬಿಐ ಪ್ರವೇಶ ಮಾಡುವುದಕ್ಕೆ ನಿರ್ಬಂಧ ಹೇರುವ ಖಡಕ್ ನಿರ್ಧಾರ ಕೈಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದೇ ರೀತಿಯ ಕ್ರಮ ಕೈಗೊಂಡಿರುವುದು ಸಿಬಿಐ ಮೇಲಿನ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತಾಗಿದೆ.