ಮುಂಬೈ : ಹುಟ್ಟು ಹಬ್ಬದ ದಿನವೇ 27 ವರ್ಷದ ಯುವತಿಯೊಬ್ಬಳ ಮೇಲೆ ಆಕೆಯ ಪ್ರಿಯತಮ ಹಾಗೂ ಆತನ ಸ್ನೇಹಿತ ಸೇರಿ ಅತ್ಯಾಚಾರ ಎಸಗಿದ ಘಟನೆ ಮುಂಬೈನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಫೆ.13ರಂದು ಯುವತಿಯ ಹುಟ್ಟುಹಬ್ಬದ ಪಾರ್ಟಿಯನ್ನು ಗೆಳೆಯನ ಮನೆಯಲ್ಲಿ ಏರ್ಪಡಿಸಲಾಗಿತ್ತು. ಹುಟ್ಟುಹಬ್ಬ ಆಚರಿಸಿಕೊಳ್ಳಲು ಯುವತಿ ಗೆಳೆಯನ ಮನೆಗೆ ಬಂದಾಗ ಆಕೆಗೆ ಮದ್ಯಪಾನ ಮಾಡಿಸಿದ ಪ್ರಿಯತಮ ಹಾಗೂ ಆತನ ಸ್ನೇಹಿತ ಆಕೆ ನಶೆಯಲ್ಲಿದ್ದಾಗ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಈ ವಿಚಾರ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಯುವತಿ ವಾಲಿವ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.