Publish Date: Mon, 27 Aug 2018 (19:32 IST)
Updated Date: Mon, 27 Aug 2018 (19:34 IST)
ಬಡ್ಡಿ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸಿದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ನಾರಾಯಣಸ್ವಾಮಿ (32) ಹಲ್ಲೆಗೊಳಗಾದ ವ್ಯಕ್ತಿ. ಹೊಸಕೋಟೆ ತಾಲೂಕಿನ ಕೆ.ಮುತ್ಸಂದ್ರ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಯನ್ನು ಕುಂಬಳಹಳ್ಳಿ ಗ್ರಾಮದ ನಿವಾಸಿಗಳಾದ ಪ್ರಕಾಶ್, ಶಶಿ ಹಾಗೂ ಇಬ್ಬರು ಸಹಚರರು ನಿನ್ನೆ ರಾತ್ರಿ 10 ಗಂಟೆಗೆ ಕೆ.ಮುತ್ಸಂದ್ರ ಗ್ರಾಮದ ಗೇಟ್ ಬಳಿಯ ನಾರಾಯಣಸ್ವಾಮಿ ಹೋಟೆಲ್ ಬಳಿ ಹಲ್ಲೆ ನಡೆಸಿ ಅಲ್ಟೋ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದಾರೆ.
ಬೆಂಗಳೂರು ಪೂರ್ವ ತಾಲೂಕಿನ ಕಾಡುಗೋಡಿ ಸಮೀಪದ ಬನಹಳ್ಳಿ ಬಳಿ ಕರೆತಂದು ಕೊಲೆ ಮಾಡಲು ಯತ್ನಿಸಿದಾಗ ಸಿನಿಮೀಯ ರಿತಿಯಲ್ಲಿ ಅಪಹರಣಕಾರರಿಂದ ತಪ್ಪಿಸಿಕೊಂಡಿದ್ದಾರೆ. ಅಲ್ಲಿಂದ ಬಂದ ನಾರಾಯಣಸ್ವಾಮಿ, ಖಾಸಗಿ ಶಾಲೆಯೊಂದರ ಸೆಕ್ಯೂರಿಟಿ ಗಾರ್ಡ್ ನ ಮೊಬೈಲ್ ನಿಂದ ತಮ್ಮ ಅಣ್ಣನಿಗೆ ಕಾಲ್ ಮಾಡಿ ಕರೆಸಿಕೊಂಡು ಪ್ರಾಣಾಪಾಯದಿಂದ ಪಾರಾಗಿ ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆ ಮರೆಸಿಕೊಂಡಿರುವ ಅರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.