ಬೆಂಗಳೂರು : ಲವ್ ಬ್ರೇಕ್ ಅಪ್ ಆಗಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರೇಯಸಿಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ಬೆಂಗಳೂರು ಹೊರ ವಲಯದ ಆನೇಕಲ್‍ನಲ್ಲಿ ನಡೆದಿದೆ.
ಬೆಳ್ಳಂದೂರು ನಿವಾಸಿ ಗಿರೀಶ್ ಕೃತ್ಯ ಎಸಗಿದ ಪಾಗಲ್ ಪ್ರೇಮಿ. ಈತ ತನ್ನ ಪ್ರೇಯಸಿಮನೆಯಲ್ಲಿ ಒಬ್ಬಳೇ ಇರುವುದನ್ನು ಗಮನಿಸಿ ಆಕೆಯ ಮನೆಗೆ ನುಗ್ಗಿ ಕತ್ತು ಕೊಯ್ದು ಹತ್ಯೆ ಮಾಡಲು ಯತ್ನಿಸಿದ್ದಾನೆ. ಆಗ ಆಕೆ ಕಿರುಚಾಡಿದಾಗ ಪಕ್ಕದ ಮನೆಯವರು ಬಂದ ಕಾರಣ ಆತ ಅಲ್ಲಿಂದ ಪರಾರಿಯಾಗಿದ್ದಾನೆ.
ಈ ವಿಚಾರ ಪೊಲೀಸರಿಗೆ ತಿಳಿಸಿದ ನೆರೆಯವರು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪಾಗಲ್ ಪ್ರೇಮಿ ಗಿರೀಶ್ ವಿರುದ್ಧ ಆನೇಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.