ತುಮಕೂರು : ನಡೆದಾಡುವ ದೇವರು ಎಂದೇ ಪ್ರಸಿದ್ಧರಾದ ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಲಿಂಗೈಕ್ಯರಾದ ಹಿನ್ನಲೆಯಲ್ಲಿ ಇಂದು ಸಂಜೆ 4 ಗಂಟೆ 30 ನಿಮಿಷಕ್ಕೆ ಕ್ರಿಯಾ ಸಮಾಧಿ ನಡೆಯಲಿದೆ.
ಶ್ರೀಗಳು ಲಿಂಗೈಕ್ಯರಾಗಲಿರುವ ಗರ್ಭಗುಡಿಯಲ್ಲಿ 12 ಅಡಿ ಆಳದ ಸಮಾಧಿ ಗುಂಡಿ ತೆಗೆಯಲಾಗಿದೆ. ಶ್ರೀಗಳ ಕ್ರಿಯಾ ಸಮಾಧಿ ನಡೆಯಲಿರುವ ಭವನವನ್ನು ತಳಿರು ತೋರಣ, ಹೂಗಳಿಂದ ಅಲಂಕರಿಸಲಾಗುತ್ತಿದೆ. ಶ್ರೀಗಳು ಈ ಸ್ಥಳದಲ್ಲಿ ಲಿಂಗೈಕ್ಯವಾಗಿ ಲಿಂಗದ ರೂಪದಲ್ಲಿ ದರ್ಶನ ನೀಡಲಿದ್ದಾರೆ.
ಗದ್ದುಗೆ ನಾಲ್ಕು ಮೂಲೆಗಳಲ್ಲಿ ಕರಡಿಗೆಯ ಚಿತ್ರವನ್ನು ಕೆತ್ತಲಾಗಿದೆ. ಈ ಭವನ ಸಂಪೂರ್ಣ ಅಮೃತಶಿಲೆಯಿಂದ ನಿರ್ಮಾಣಗೊಂಡಿದೆ. ಗರ್ಭಗುಡಿ ಶಿಲಾ ಬಾಗಿಲ ಮೇಲೆ 26 ದೇವರನ್ನು ಕೆತ್ತಲಾಗಿದೆ. ಬಾಗಿಲ ಎಡ, ಬಲ ಭಾಗದಲ್ಲಿ ಅಷ್ಟ ದಿಕ್ಪಾಲಕರು, ಸಿದ್ದಗಂಗಾ ಮಠದ ದೇವರಾದ ಸಿದ್ದಲಿಂಗೇಶ್ವರ ಸ್ವಾಮೀಜಿ, ಬಸವಣ್ಣ, ಲಿಂಗೈಕ್ಯ ಗೋಸಲ ಸಿದ್ದೇಶ್ವರ, ಉದ್ದಾನ ಶಿವಯೋಗಿ, ಯಡಿಯೂರು ಸಿದ್ದಲಿಂಗೇಶ್ವರ, ಅಟವಿ ಶಿವಯೋಗಿ, ಬೇಡರ ಕಣ್ಣಪ್ಪ, ಅಕ್ಕಮಹಾದೇವಿ ಸೇರಿದಂತೆ 26 ಮೂರ್ತಿಗಳನ್ನು ಕೆತ್ತಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.