Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಿ.ಟಿ.ರವಿ ಕಾರು ಅಪಘಾತ ಪ್ರಕರಣದ ಬಗ್ಗೆ ಬಿಜೆಪಿ ಹೇಳಿದ್ದೇನು ಗೊತ್ತಾ?

ಸಿ.ಟಿ.ರವಿ ಕಾರು ಅಪಘಾತ ಪ್ರಕರಣದ ಬಗ್ಗೆ ಬಿಜೆಪಿ ಹೇಳಿದ್ದೇನು ಗೊತ್ತಾ?
ಬೆಂಗಳೂರು , ಮಂಗಳವಾರ, 19 ಫೆಬ್ರವರಿ 2019 (13:15 IST)
ಬೆಂಗಳೂರು : ಕುಣಿಗಲ್ ತಾಲೂಕಿನ ಉರ್ಕೇಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರಿಗೆ ಶಾಸಕ ಸಿಟಿ ರವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.


ಈ ಘಟನೆಯ ಬಗ್ಗೆ ಮೃತರ ಕುಟುಂಬದವರು ಹಾಗೂ ಸ್ನೇಹಿತರು ಶಾಸಕರ ಸಿಟಿ ರವಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ಇಂತಹ ಘೋರ ಕೃತ್ಯ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ, ಮಾಧ್ಯಮಗಳಲ್ಲಿ ಬಂದ ಹಾಗೆ ಸಿ.ಟಿ. ರವಿ ಅವರಿಗೆ ಕುಡಿಯೋ ಅಭ್ಯಾಸವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.


ಹಾಗೇ ಅಪಘಾತದಲ್ಲಿ ಸಿ.ಟಿ ರವಿ ಎದೆಗೂ ಗಾಯವಾಗಿದೆ. ಅವರು ಕಾರನ್ನ ಚಲಾಯಿಸುತ್ತಿರಲಿಲ್ಲ. ಘಟನೆ ನಡೆದ ಕೂಡಲೇ ಅವರು ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆಯನ್ನ ಮೆರೆದಿದ್ದಾರೆ. ಅವರು ಕೂಡ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇವೆ. ಪೊಲೀಸರು ಅವಕಾಶ ಕೊಟ್ಟ ನಂತರವೇ ಅವರು ಅಪಘಾತ ಸ್ಥಳದಿಂದ ಹೋಗಿದ್ದಾರೆ ಎಂದು ರಾಜ್ಯ ಬಿಜೆಪಿ ಸ್ಪಷ್ಟನೆ ನೀಡಿದ್ದಾರೆ.


ಈ ಘಟನೆ ಕುರಿತು ಸಿ.ಟಿ. ರವಿ ವಿರುದ್ಧ ಕುಣಿಗಲ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 304 ಅಡಿ ಎಫ್ ಐಆರ್ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವರ್ಷದ ಅತ್ಯಂತ ದೊಡ್ಡ ಸೂಪರ್ ಸ್ನೋ ಮೂನ್