Publish Date: Fri, 05 Apr 2019 (17:26 IST)
Updated Date: Fri, 05 Apr 2019 (17:27 IST)
ವಿವಿಧ ಪೋಲಿಸ್ ಠಾಣೆಗಳಲ್ಲಿ ಒಂಭತ್ತಕ್ಕೂ ಹೆಚ್ಚು ಪ್ರಕರಣಗಳಿಗೆ ಬೇಕಾಗಿದ್ದ ಆರೋಪಿಗಳ ಬಂಧನವಾಗಿದೆ.
ಮನೆಗಳ್ಳತನ ಮಾಡುತ್ತಿದ್ದ ಖದೀಮರ ಬಂಧನ ಮಾಡಲಾಗಿದೆ. ಬೆಂಗಳೂರು ಉಪವಿಭಾಗ ಹೆಬ್ಬಗೋಡಿ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಹೆಬ್ಬಗೋಡಿ, ಸೂರ್ಯನಗರ, ಆನೇಕಲ್, ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆ.ಗಣೇಶ್, ಮನೀಸ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ವಿವಿಧ ಪೋಲಿಸ್ ಠಾಣೆಗಳಲ್ಲಿ ಒಂಭತ್ತಕ್ಕೂ ಹೆಚ್ಚು ಪ್ರಕರಣಗಳಿಗೆ ಬೇಕಾಗಿದ್ದ ಕಳ್ಳರು ಇವರಾಗಿದ್ದರು. ಆರೋಪಿಗಳಿಂದ 54,60,000 ಬೆಲೆ ಬಾಳುವ 1820 ಚಿನ್ನಾಭರಣ ವಶ ಪಡಿಸಿಕೊಂಡ ಪೊಲೀಸರು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.