Publish Date: Fri, 11 Jan 2019 (15:20 IST)
Updated Date: Fri, 11 Jan 2019 (15:24 IST)
ಹಂತಕ ಚಿರತೆ ದಾಳಿಗೆ ಸಾವಿರಾರು ರೂಪಾಯಿ ಮೌಲ್ಯದ ನಾಲ್ಕು ಕುರಿಗಳು ಬಲಿಯಾದ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಬೇವಿನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೇವಿನಹಳ್ಳಿ ಗ್ರಾಮದ ಮಂಜಪ್ಪ ಎಂಬುವರಿಗೆ ಸೇರಿದ ಕುರಿಗಳನ್ನು ಚಿರತೆ ತಿಂದು ಹಾಕಿದೆ.
ಚಿರತೆ ದಾಳಿಯಿಂದ ಜನರಲ್ಲಿ ಆತಂಕ ಹೆಚ್ಚಿದೆ. ಹೊಸದುರ್ಗ-ಬೇವಿನಹಳ್ಳಿ ಗ್ರಾಮದ ನಡುವೆ ರಾತ್ರಿ ಕಾಣಿಸಿಕೊಳ್ಳುತ್ತಿರುವ ಚಿರತೆ ಜನರಲ್ಲಿ ಭಯಕ್ಕೆ ಕಾರಣವಾಗಿದೆ. ರಾತ್ರಿ 7ಗಂಟೆ ಮೇಲೆ ಜನರ ಓಡಾಟಕ್ಕೆ ತೊಂದರೆ ಕೊಡುತ್ತಿರುವ ಚಿರತೆಯಿಂದಾಗಿ ಜನರು ದಿಕ್ಕು ತೋಚದಂತಾಗಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಸೆರೆಹಿಡಿಯಬೇಕೆಂದು ಜನರು ಒತ್ತಾಯ ಮಾಡಿದ್ದಾರೆ.