Webdunia - Bharat's app for daily news and videos

Install App

ತಡರಾತ್ರಿ ಮನೆ ಗೇಟ್ ತೆರೆದು ಅಲ್ಲಿ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 9 ಫೆಬ್ರವರಿ 2019 (14:34 IST)
ತಡರಾತ್ರಿ ಮನೆಗೇಟ್ ತೆರೆದು ಒಳ ಬಂದ ವ್ಯಕ್ತಿಯೊಬ್ಬ ಮಾಡಬಾರದ ಕೆಲಸ ಮಾಡಿದ್ದಾನೆ. ಆತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಆನೇಕಲ್ ಪಟ್ಟಣದಲ್ಲಿ ಖದೀಮರ ಕೈಚಳಕ ನಿಲ್ಲುತ್ತಿಲ್ಲ. ಮಧ್ಯರಾತ್ರಿ ಮನೆ ಗೇಟ್ ತೆಗೆದು ಒಂದು ದ್ವಿಚಕ್ರ ವಾಹನ ಹಾಗೂ ಸೈಕಲ್ ನ್ನು ಕಳ್ಳತನಮಾಡಲಾಗಿದೆ.

ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಸ್ವಾಮಿ ದೇವಾಲಯದ ರಸ್ತೆಯಲ್ಲಿ ಘಟನೆ ನಡೆದಿದೆ. ಕಳ್ಳ ಬೈಕ್ ಹಾಗೂ ಸೈಕಲ್ ಕದಿಯುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಂದಿದ್ದ ಕಳ್ಳ, ಮನೆ ಗೇಟ್ ಬಳಿ ಬಂದು ಸಿಸಿ ಕ್ಯಾಮರಾ ಗಮನಿಸಿ ಟವಲ್ ನಲ್ಲಿ ಮೂಖ ಮುಚ್ಚಿಕೊಂಡಿದ್ದಾನೆ. ಬಾಬು ಎಂಬುವವರಿಗೆ ಸೇರಿದ ಮನೆಯಲ್ಲಿ ಕಳ್ಳತನ ಮಾಡಿದ್ದಾನೆ.

ಪಟ್ಟಣದಲ್ಲಿ ಒಂದೇ ವಾರದಲ್ಲಿ ಮೂರು ಕಡೆ ಸರಣಿ ಪ್ರಕರಣಗಳು ನಡೆದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.  
ಮೂರು ಕಳ್ಳತನ ಪ್ರಕರಣಗಳಲ್ಲಿಯೂ ಸಿಸಿಟಿವಿಯ ದೃಶ್ಯ ಲಭ್ಯವಾದರೂ ಕಳ್ಳರು ಇನ್ನೂ ಸಿಕ್ಕಿಲ್ಲ. ಘಟನೆ ಸಂಬಂಧ ಆನೇಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments