Webdunia - Bharat's app for daily news and videos

Install App

ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದರೂ ಇನ್ನೂ ಅನೌನ್ಸ್ ಆಗಲಿಲ್ಲ ಯಾಕೆ ಗೊತ್ತಾ?

Webdunia
ಶುಕ್ರವಾರ, 17 ಜನವರಿ 2020 (10:50 IST)
ಬೆಂಗಳೂರು : ಡಿಕೆ ಶಿವಕುಮಾರ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟರೂ ಕೂಡ ಕೆಪಿಸಿಸಿ ಅಧ್ಯಕ್ಷ ಹುದ್ದೆ ಇನ್ನೂ ಅನೌನ್ಸ್ ಆಗಲಿಲ್ಲ.

ಹೌದು. ಕೆಪಿಸಿಸಿ ಅಧ್ಯಕ್ಷ ಹುದ್ದೆ ನಿನ್ನೆಯೇ ಅನೌನ್ಸ್ ಆಗಬೇಕಿತ್ತು. ಆದರೆ  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಆಯ್ಕೆ ವಿಚಾರದಲ್ಲಿ ಷರತ್ತು ವಿಧಿಸಿದ್ರಾ ಸಿದ್ದರಾಮಯ್ಯ? ಕಾರ್ಯಾಧ್ಯಕ್ಷರ ಹುದ್ದೆಗೆ ಪಟ್ಟು ಹಿಡಿದ್ರಾ ಸಿದ್ದರಾಮಯ್ಯ? ಎಂಬ  ಅನುಮಾನ ವ್ಯಕ್ತವಾಗಿದೆ. ಕಾರ್ಯಾಧ್ಯಕ್ಷ ಹುದ್ದೆಗೆ ಡಿಕೆಶಿ ಸಿದ್ದರಾಮಯ್ಯ  ನಡುವೆ ಜಿದ್ದಾಜಿದ್ದಿ ನಡೆದಿದ್ದು ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸುವಂತೆ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.  ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತ, ವೀರಶೈವ ಲಿಂಗಾಯುತ ಒಟ್ಟು 4 ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸುವಂತೆ ಹೈಕಮಾಂಡ್ ಗೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.

ಪರಿಶಿಷ್ಟ ಪಂಗಡದಿಂದ ಸತೀಶ್ ಜಾರಕಿಹೊಳಿ, ಅಲ್ಪಸಂಖ್ಯಾತ ಕೋಟಾದಿಂದ ಯುಟಿ ಖಾದರ್ ಅಥವಾ ಜಮೀರ್ ಅಹ್ಮದ್, ಉಳಿದಂತೆ ಹಾಲಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಯನ್ನ ಮುಂದುವರಿಸಿ, ಎಂಬಿ ಪಾಟೀಲ್ ರನ್ನ ಸಿಎಲ್ ಪಿ ಲೀಡರ್ ಮಾಡಿ , ನನಗೆ ವಿಪಕ್ಷ ನಾಯಕ ಸ್ಥಾನವೊಂದೇ ಸಾಕು. ಇದರಿಂದ 4 ದಿಕ್ಕಿನಲ್ಲಿ ಪಕ್ಷ ಸಂಗಟನೆ ಮಾಡಬಹುದು , ಸಾಮಾಜಿಕ ನ್ಯಾಯ ಸಿಕ್ಕಿದಂತಾಗುತ್ತದೆ ಎಂಬುದು ಸಿದ್ದರಾಮಯ್ಯ ಪ್ಲ್ಯಾನ್ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments