Publish Date: Sun, 10 Oct 2021 (20:39 IST)
Updated Date: Sun, 10 Oct 2021 (20:45 IST)
ಬೆಂಗಳೂರು : ಕಾಂಗ್ರೆಸ್ ನಾಯಕರಿಗೆ ಕಾಮಾಲೆ ಇದೆ ಹಾಗಾಗಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಿಲ್ಲ, ಆದ್ದರಿಂದ ಅವರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ( CM Basavaraj bommayi ) ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾಜಿ ಸಿಎಂ ಯಡಿಯೂರಪ್ಪನನ್ನು (BS YADIYURAPPA) ಮೂಲೆಗುಂಪು ಮಾಡಲು ಕಣ್ಣೀರು ಹಾಕಿಸಿ ಅಧಿಕಾರ ಕಿತ್ತುಕೊಂಡರು ಎಂಬ ಕಾಂಗ್ರೆಸ್ (CONGRESS) ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಅವರ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ಕಾಮಾಲೆ ಇದೆ ಹಾಗಾಗಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಿಲ್ಲ, ಆದ್ದರಿಂದ ಅವರ ಹೇಳಿಕೆಗೆ ಮಹತ್ವ ( STATEMENT) ಕೊಡುವ ಅಗತ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಕಾಂಗ್ರೆಸ್ ನವರು ಸಮಯಕ್ಕೆ ತಕ್ಕಂತೆ ಮಾತನಾಡುತ್ತಾರೆ. ಅವರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ, ಮಾಧ್ಯಮದವರು ( MEDIA) ಕೂಡ ಅವರ ಹೇಳಿಕೆಗೆ ಪ್ರಾಮುಖ್ಯತೆ ನೀಡಬಾರದು ಎಂದರು. ಬೆಂಗಳೂರು ಉಸ್ತುವಾರಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು ಎಲ್ಲರ ಸಲಹೆ ಪಡೆದುಕೊಂಡು ಅತ್ಯಂತ ಸೌಹಾರ್ದಯುತವಾಗಿ ಪರಿಹರಿಸಲಾಗುತ್ತದೆ ಎಂದು ಹೇಳಿದರು.