ದೀಪಾವಳಿ ಹಬ್ಬದಂದು ದೇವಾಲಯಗಳಲ್ಲಿ ಗೋ ಪೂಜೆಗೆ ರಾಜ್ಯ ಸರ್ಕಾರ ಅ ಅನುಮತಿ ನೀಡಿದ್ದು,ಇದು ರಾಜಕೀಯ ಬಣ್ಣ ಪಡೆದಿದೆ.
ಗ್ರಾಮೀಣ ಭಾರತದಲ್ಲಿ ಕೃಷಿಯ ಮೂಲಕ ಬದುಕು ಕಂಡು ಕೊಂಡಿರುವ ಎಲ್ಲಾ ರೈತರೂ ಕೂಡಾ ದೀಪಾವಳಿ ಮತ್ತು ಸಂಕ್ರಾಂತಿ ಹಬ್ಬದ ವೇಳೆ ಹಸುಗಳ ಮೈತೊಳೆದು, ಅಲಂಕಾರ ಮಾಡಿ, ನಂತರ ಕಿಚ್ಚು ಹಾಯಿಸುವಂತಹ ಆಚರಣೆಯು ಅನಾದಿ ಕಾಲದಿಂದಲೂ ಇದೆ.ಬೆಲೆ ಏರಿಕೆಯ ನಡುವೆ ದೀಪಾವಳಿಯೂ ಬೇಡ ಏನೂ ಬೇಡ ಎಂಬ ಪರಿಸ್ಥಿತಿಗೆ ಜನ ಸಾಮಾನ್ಯರನ್ನು ನೂಕಿರುವ ಬಿಜೆಪಿಗರು ಗೋವಿನ ಹೆಸರಲ್ಲಿ ರಾಜಕೀಯ ಮಾಡುತ್ತಿರುವುದು ಅತ್ಯಂತ ಹಾಸ್ಯಾಸ್ಪದ ಬೆಳವಣಿಗೆ ಎಂದಿದ್ದಾರೆ. ನಿಜವಾಗಲೂ ಹಸುಗಳ ಬಗ್ಗೆ ಪ್ರೀತಿ ಇದ್ದರೆ ಮೊದಲು ಇವರು ಮಾಡುತ್ತಿರುವ ಗೋಮಾಂಸ ರಫ್ತನ್ನು ನಿಲ್ಲಿಸಲಿ ಎಂದಿದ್ದಾರೆ.