Publish Date: Fri, 19 May 2023 (14:04 IST)
Updated Date: Fri, 19 May 2023 (13:47 IST)
ಇನ್ನು ನಾವು ಕೂಡ ಕರೆಂಟ್ ಬಿಲ್ ಕಟ್ಟಲ್ಲವೆಂದು ಜನ ಪಟ್ಟು ಹಿಡಿದಿದ್ದಾರೆ. ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಎಂಬುವವರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಮನೆಯಲ್ಲಿ ಬೋರ್ಡ್ ಅಳವಡಿಸಿದ್ದಾರೆ. ಕಾಂಗ್ರೆಸ್ ಸರಕಾರ ಬಂದರೆ ಹಲವಾರು ಉಚಿತ ಯೋಜನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇಕಡಾ 95 ಜನತೆ ಇದರ ಲಾಭ ಪಡೆಯಬಹುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಡಿಕೆಶಿ ಹೇಳಿರುವ ಶೇಕಡಾ 95ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಕೂಡ ಒಬ್ಬ ಫಲಾನುಭವಿ ಎಂಬುದು ದೃಢ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ ನಾನು ವಿದ್ಯುತ್ ಬಿಲ್ ಕಟ್ಟೋದಿಲ್ಲ, ಯಾಕಂದ್ರೆ ನಾನು ಸರಕಾರಕ್ಕೆ ತೆರಿಗೆ ಕಟ್ಟುತ್ತಿರುವುದರಿಂದ ಈ ಯೋಜನೆಗೆ ಅರ್ಹ ಫಲಾನುಭವಿ ಆಗಿದ್ದೇನೆ ಎಂದು ಉಡುಪಿಯ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.