Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಳಗಾವಿ : ಅಧಿವೇಶನದಲ್ಲಿ ಶಾಸಕರ, ಸಚಿವರ ಹಾಜರಾತಿ ಕಡ್ಡಾಯಕ್ಕೆ ಕ್ರಮ ವಹಿಸಲಾಗಿದೆ. ಅಧಿವೇಶನಕ್ಕೆ ಹೋಗಲ್ಲ, ಅಲ್ಲೇನಿದೆ ಎಂಬ ಶಾಸಕರ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿದೆ.
ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬಾರದು. ನಾನು ಅದನ್ನು ಸಹಿಸುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಖಡಕ್ ಎಚ್ಚರಿಕೆ ನೀಡಿದ್ದಾರೆ
ನಗರದ ಸುವರ್ಣ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 19 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ 6 ವಿಧೇಯಕ ಮಂಡನೆಗೆ ಸರ್ಕಾರ ನಿರ್ಧಾರ ಮಾಡಿದೆ.
ಬೆಂಗಳೂರು ಭೂಸುಧಾರಣೆ ಕಾಯ್ದೆ, ಕನ್ನಡ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆಯಾಗಿವೆ. ಚಳಿಗಾಲದ ಅಧಿವೇಶನ ವೇಳೆ ಚರ್ಚೆ ಮಾಡಿ, ಅಂಗೀಕಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಇದಲ್ಲದೇ ಈ ಬಾರಿ ನಡೆಯುವ ಗಡಿಪ್ರದೇಶ ಅಭಿವೃದ್ಧಿ ವಿಧೇಯಕ ಸೇರಿ 6 ಮಸೂದೆಗಳನ್ನು ಮಂಡಿಸಲಾಗುವುದು ಎಂದು ತಿಳಿಸಿದರು.