ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಭ್ರಷ್ಟಾಚಾರ ಸರಕಾರ. ಕಾಂಗ್ರೆಸ್ ಪಕ್ಷವನ್ನು ಯಾರೂ ನಂಬಬಾರದು ಎಂದು ಬಿಜೆಪಿ ಮುಖಂಡ, ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರದಲ್ಲಿ ಹೆಚ್ಚಳವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಾಡಹಗಲೇ ಬಿಜೆಪಿ ಮುಖಂಡರ ಮೇಲೆ ದಾಳಿಗಳಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಯಾವುದೇ ಅಧಿಕಾರದ ಆಸೆಯಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ. ಪ್ರಧಾನಿ ಮೋದಿಯವರ ಪಾರದರ್ಶಕ ಅಡಳಿತವನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಬಿಜೆಪಿ ಪಕ್ಷ ಅಧಿಕಾರದ ಗದ್ದುಗೆ ಏರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.