ಯಾವುದೇ ಕಾರಣಕ್ಕೂ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಬಾರದು ಎಂದು ಕಾವೇರಿ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ಆಗ್ರಹಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಆದೇಶದಂತೆ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಟ್ಟರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಸುಪ್ರೀಂಕೋರ್ಟ್ ಆದೇಶ ಪ್ರಶ್ನಿಸಲು ಸಾಧ್ಯವೇ, ಆದ್ರೆ, ಕಾವೇರಿ ನದಿಯಿಂದ ತಮಿಳನಾಡಿಗೆ ನೀರು ಬಿಡುವುದನ್ನು ನಿಲ್ಲಿಸಿ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸರ್ವಪಕ್ಷ ಸಭೆಯ ಬಳಿಕ ಮಾತನಾಡುತ್ತೇನೆ ಎಂದು ಹೇಳಿದರು.
2007ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ತೀರ್ಪು ಪ್ರಶ್ನಿಸಿ ಕರ್ನಾಟಕ ಹಾಗೂ ತಮಿಳುನಾಡು ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮುಂದಿನ ಆದೇಶ ನೀಡುವವರೆಗೂ ಕಾವೇರಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕ ಸರಕಾರಕ್ಕೆ ಸೂಚನೆ ನೀಡಿದೆ. ಹಾಗೂ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆಯ ತೀರ್ಪು ಕಾಯ್ದಿರಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ