Publish Date: Fri, 21 Sep 2018 (16:16 IST)
Updated Date: Fri, 21 Sep 2018 (16:18 IST)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಸಿಎಂ ಕುಮಾರಸ್ವಾಮಿ ದಂಗೆ ಹೇಳಿಕೆಯ ಬಗ್ಗೆ ಇದೀಗ ದೋಸ್ತಿ ಸರ್ಕಾರದ ಕಾಂಗ್ರೆಸ್ ಸಚಿವರು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.
ಸಚಿವರು, ಸಿಎಂ ಸ್ಥಾನದಲ್ಲಿದ್ದುಕೊಂಡು ಈ ರೀತಿಯ ಹೇಳಿಕೆ ಕೊಟ್ಟಿರುವುದು ಸರಿಯಲ್ಲ. ವಿರೋಧ ಪಕ್ಷದವರು ಏನೇ ಹೇಳಲಿ, ಸಿಎಂ ಸ್ಥಾನದಲ್ಲಿರುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಆದರೆ, ಕುಮಾರಸ್ವಾಮಿ ದಂಗೆ ಪದ ಬಳಕೆ ಮಾಡಿದ್ದು, ಒಪ್ಪುವಂತಹದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಜವಾಬ್ದಾರಿ ಸರ್ಕಾರದ್ದು, ಅದು ಬಿಟ್ಟು ಉದ್ವೇಗಕ್ಕೆ ಒಳಗಾಗಿ ಮಾತನಾಡಿರುವುದು ಸರಿಯಲ್ಲ. ಪ್ರತಿಯೊಂದಕ್ಕೂ ರಿಯಾಕ್ಟ್ ಮಾಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅನಗತ್ಯ ಹೇಳಿಕೆಗಳಿಗೆ ಬ್ರೇಕ್ ಹಾಕದಿದ್ದಲ್ಲಿ ಮತ್ತಷ್ಟು ಸಮಸ್ಯೆ ಎದುರಾಗಲಿದೆ ಎಂದು ಹಲವು ಕೈ ನಾಯಕರು ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ