Publish Date: Sun, 11 Jun 2023 (17:21 IST)
Updated Date: Sun, 11 Jun 2023 (17:24 IST)
ಇಬ್ಬರು ಆತ್ನೀಯ ಸ್ನೇಹಿತರು ಮದ್ಯದ ಜೊತೆ ವಿಷದ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಅದೇ ಗ್ರಾಮದ ಮನು ಹಾಗೂ ಇತ್ತಲದೊಡ್ಡಿ ಗ್ರಾಮದ ಆನಂದ್@ ನಾಗೇಂದ್ರ ಆತ್ಮಹತ್ಯೆಗೆ ಯತ್ನಿಸಿದ್ದು, ಇವರಲ್ಲಿ ನಾಗೇಂದ್ರ ಎಂಬಾತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮನು ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ. ಲಕ್ಕರಸನ ಪಾಳ್ಯ ಗ್ರಾಮದ ರಸ್ತೆಯಲ್ಲಿ ಮದ್ಯದ ಜೊತೆಗೆ ವಿಷ ಸೇವಿಸಿ ರಸ್ತೆಯಲ್ಲಿ ಒದ್ದಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಾಗೇಂದ್ರ ಸಾವನ್ನಪ್ಪಿದ್ದಾನೆ. ಮನು ಚಿಂತಾಜನಕ ಸ್ಥಿತಿಯಲ್ಲಿದ್ದಾನೆ.