Publish Date: Sat, 03 Aug 2019 (10:21 IST)
Updated Date: Sat, 03 Aug 2019 (10:23 IST)
ಬೆಂಗಳೂರು : ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರು ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.
ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಾಸಕರು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಮಾತು ಕೇಳಿಬರುತ್ತಿತ್ತು. ಈ ನಡುವೆ ಇದೀಗ ಡಾ.ಕೆ.ಸುಧಾಕರ್ ಇದೀಗ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ಭೇಟಿ ಬಳಿಕ ಮಾತನಾಡಿದ ಅವರು,’ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ನನಗೆ ಬರಲು ಸಾಧ್ಯವಾಗಲಿಲ್ಲ.ಹೀಗಾಗಿ ಈಗ ಬಂದು ಅವರಿಗೆ ಅಭಿನಂದನೆಯನ್ನು ಸಲ್ಲಿಸಿದ್ದೇನೆ. ಸಿಎಂ ಬಳಿ ರಾಜಕೀಯವಾಗಿ ಏನೂ ಚರ್ಚೆ ಮಾಢಿಲ್ಲ. ಚಿಕ್ಕಬಳ್ಳಾಪುರ ಜಿಲ್ಲೆ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.