Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

26ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಚಾಲನೆ

26ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಚಾಲನೆ
ಕಲಬುರಗಿ , ಸೋಮವಾರ, 17 ಡಿಸೆಂಬರ್ 2018 (14:01 IST)
ಮೂರು ದಿನಗಳು ನಡೆಯುವ 26ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ-2018ಕ್ಕೆ ಚಾಲನೆ ನೀಡಲಾಗಿದೆ.

ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಪ್ರತಿಭೆಗೆ ಕೊರತೆಯಿಲ್ಲ ಆದರೆ ಅಡಗಿರುವ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆ ಮತ್ತು ಪ್ರೋತ್ಸಾಹದ ಅಗತ್ಯವಿದೆ ಎಂದು ಸಮಾಜ ಕಲ್ಯಾಣ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಅಂಬೇಡ್ಕರ ಸಭಾಂಗಣದಲ್ಲಿ  ಆಯೋಜಿಸಿರುವ 26ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ-2018 ಉದ್ಘಾಟಿಸಿ ಮಾತನಾಡಿದರು.

ದೇಶದ ಮುಂದಿನ ಪ್ರಜೆಗಳಾದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬಿತ್ತುವ ಮೂಲಕ ಪ್ರಭದ್ಧ ಸಮಾಜ ನಿರ್ಮಾಣ ಮಾಡಬೇಕಿದೆ. ಯಾವಾಗ ಸಮಾಜದಲ್ಲಿ ಪ್ರಭುದ್ವತೆ ಸಾಧಿಸಲಾಗುತ್ತೋ ಆಗ ಪ್ರಗತಿ ನಿರೀಕ್ಷಿಸಬಹುದಾಗಿದೆ. ಮಾನವನ ಅಸ್ತಿತ್ವಕ್ಕೆ ಕುತೂಹಲ ಅಗತ್ಯ ಎಂದರು.  ಮೌಢ್ಯಾಚರಣೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ತತ್ವದಡಿ ಜಾಗೃತಿ ಉಂಟು ಮಾಡುವ ಕೆಲಸ ಮಾಡಬೇಕಿದೆ ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಮತ್ತೊಂದು ಚಂಡಮಾರುತದ ಮುನ್ಸೂಚನೆ ನೀಡಿದ ಐಎಂಡಿ