Publish Date: Tue, 25 Jul 2023 (13:20 IST)
Updated Date: Tue, 25 Jul 2023 (14:34 IST)
ರಾಜ್ಯದಲ್ಲಿ ಮುಂದಿನ 48ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.ನೈರುತ್ಯ ಮುಂಗಾರು ರಾಜ್ಯದಾದ್ಯಂತ ಚುರುಕು ಹಿನ್ನೆಲೆ ಮುಂದಿನ 48ಗಂಡೆ ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ.ನಿನ್ನೆ ಪೂರ್ತಿ ದಿನ ಬೆಂಗಳೂರಿನಲ್ಲಿ ಬಿಟ್ಟುಬಿಡದೇ ಮಳೆ ಸುರಿದಿದೆ.ಮುಂದಿನ 48 ಘಂಟೆ ಕರಾವಳಿಯ ಎಲ್ಲ ಜಿಲ್ಲೆಗಳ ಭಾರೀ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಕಲಬುರ್ಗಿ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಬಿರುಗಾಳಿಯ ವೇಗವು ಘಂಟೆಗೆ 40-50 ಕಿ.ಮೀ. ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ