ಮೇಕೆದಾಟು ಯೋಜನೆಗೆ ಡಿಆರ್‌ಆರ್ ಸಿದ್ಧವಾಗಿದ್ದು, ಯೋಜನೆಗೆ ಮುಂದಿನ ಅಧಿವೇಶನದಲ್ಲಿ ಗ್ರೀನ್ ಸಿಗ್ನಲ್ ಸಿಗಲಿದೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗಾಗಿ 5900 ಕೋಟಿ ಯೂಪಾಯಿಯಲ್ಲಿ ಯೋಜನೆ ಸಿದ್ಧವಾಗಿದೆ. ಬಿಡಬ್ಲ್ಯೂಎಸ್‌ಎಸ್‌ಬಿ ಪಾಲುದಾರಿಕೆಯಲ್ಲಿ ಯೋಜನೆ ಸಿದ್ಧವಾಗುತ್ತಿದೆ ಎಂದು ಹೇಳಿದರು.
ಎತ್ತಿನಹೊಳೆ ಯೋಜನೆಗಾಗಿ ಈಗಾಗಲೇ 50 ಕಿಲೋಮೀಟರ್ ಪೈಪ್‌ಲೈನ್ ಅಳವಡಿಸಲಾಗಿದೆ. ಮುಂದಿನ ವರ್ಷದಲ್ಲಿ ಇನ್ನೂ 50 ಕಿಲೋಮೀಟರ್ ಪೈಪ್‌ಲೈನ್ ಅಳವಡಿಸಲಾಗುವುದು. ಈ ಯೋಜನೆಗಾಗಿ ಹಸಿರು ಪೀಠದಿಂದ ಕ್ಲಿಯರೆನ್ಸ್ ದೊರೆಯಲಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ