ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳು ಕೋರ್ಟ್‌ಗೆ 'ಬಿ' ರಿಪೋರ್ಟ್ ಸಲ್ಲಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಗಣಪತಿ ಕಿರಿಯ ಸಹೋದರ ಎಂ.ಕೆ.ಮಾಚಯ್ಯ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ.
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟ ಕಾರಣ ಕಂಡುಕೊಳ್ಳಲು ಸಿಐಡಿ ಅಧಿಕಾರಿಗಳು ವಿಫಲರಾಗಿದ್ದಾರೆ. ಅಲ್ಲದೆ ಕೋರ್ಟ್‌ಗೆ 'ಬಿ' ರಿಪೋರ್ಟ್ ಸಲ್ಲಿಸುವ ಮೂಲಕ ಪ್ರಕರಣದ ಹಿಂದಿರುವ ಸತ್ಯ ಮುಚ್ಚಿ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಆರೋಪಿಗಳಾಗಿದ್ದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ಅವರನ್ನು ರಕ್ಷಿಸುವ ನಿಟ್ಟಿನಲ್ಲಿ ಸಿಐಡಿ ತನಿಖೆ ನಡೆಸಿದೆ. ಈ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆಯಾಗಬೇಕು. ಅದಕ್ಕಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ