ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದುರ್ಗಾದಲ್ಲಿರೋ ಶಿವಲಿಂಗಕ್ಕೆ ಶಿವರಾತ್ರಿಯಂದು ಶಿವಲಿಂಗ ಪೂಜೆಗೆ ಕೋರ್ಟ್ ಸಮ್ಮತಿ ನೀಡಿದೆ. ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ಸಿಕ್ಕ ಹಿನ್ನೆಲೆ ಕಲಬುರಗಿಯ ಆಳಂದ ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ADGP ಅಲೋಕ್ ಕುಮಾರ್ ನೇತೃತ್ವದಲ್ಲಿ ರೂಟ್ ಮಾರ್ಚ್ ಸಿದ್ದವಾಗಿದ್ದು, ಸುಮಾರು 500ಕ್ಕೂ ಹೆಚ್ಚು ಪೊಲೀಸರಿಂದ ರೂಟ್ ಮಾರ್ಚ್ ನಡೆಯಲಿದೆ. ಶಿವಲಿಂಗ ಪೂಜೆಗೆ 15 ಜನರಿಗೆ ಕೋರ್ಟ್ ಅವಕಾಶ ನೀಡಿದ್ದು, ಶಿವರಾತ್ರಿಯಂದು ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕಳೆದ ವರ್ಷ ಶಿವರಾತ್ರಿಯಂದು ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಡಿಸಿ ಕಾರಿನ ಮೇಲೆ ಲಾಡ್ಲೇ ಮಾಶಾಕ್ ದರ್ಗಾದಲ್ಲಿ ಕೆಲ ಮುಸ್ಲಿಮರಿಂದ ಕಲ್ಲು ತೂರಾಟ ನಡೆದಿದ್ದು, ಈ ಬಾರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.