Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ

ಐಟಿ ದಾಳಿ
ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ. 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ನಗರದ ಹುಳಿಮಾವು, ಬಾಗ್ ಮನೆ ಟೆಕ್ ಪಾರ್ಕ್ ಸೇರಿದಂತೆ ಐದು ಕಡೆ‌ ದಾಳಿ ಮಾಡಿದೆ. ತೆರಿಗೆ ವಂಚನೆ ಆರೋಪದ ಮೇಲೆ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಆ ಉದ್ಯಮಿ ಯಾರು, ಯಾಕಾಗಿ ದಾಳಿ ಮಾಡಲಾಗಿದೆ, ಎಷ್ಟು ತೆರಿಗೆ ವಂಚನೆ ಮಾಡಿದ್ದಾರೆ ಎನ್ನುವ ಬಗ್ಗೆ ಇನ್ನು ಮಾಹಿತಿ ತಿಳಿದುಬಂದಿಲ್ಲ. ಎಲ್ಲಾ ದಾಖಲೆ ಪರಿಶೀಲನೆ ನಡೆಸಿದ ಬಳಿಕ ಖುದ್ದು ಐಟಿ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರ ಕಾವೇರಿ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದೆ