ಅರುಣಾಚಲ ಪ್ರದೇಶದಲ್ಲಿ ಇಂದು ಮುಂಜಾನೆ ಭೂಮಿ ನಡುಗಿದ್ದು, ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದೆ..ಚೀನಾದ ಕಿಂಗ್ಹೈನಲ್ಲಿ ಭೂಕಂಪನ ಉಂಟಾಗಿದ್ದು, ಅದರ ಪರಿಣಾಮ ಅರುಣಾಚಲ ಪ್ರದೇಶದಲ್ಲೂ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ತಿಳಿಸಿದೆ. ಪ್ಯಾಂಗಿನ್ನಿಂದ 1176 ಕಿ.ಮೀ. ದೂರದಲ್ಲಿ ಭೂ ಮೇಲ್ಮೈಗಿಂತ 30 ಕಿ.ಮೀ. ಆಳದಲ್ಲಿ ಭೂಕಂಪನವಾಗಿದ್ದಾಗಿ ಹೇಳಿದೆ..ಯಾರೂ ಮೃತಪಟ್ಟ ಮತ್ತು ಯಾವುದೇ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಲಾಗಿದೆ.