ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ 5-6 ಸೆಕೆಂಡ್‌ಗಳ ಕಾಲ ಭೂಕಂಪದ ಅನುಭವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದ ಘಟನೆ ವರದಿಯಾಗಿದೆ.
ಇಂದು ಬೆಳಿಗ್ಗೆ 6.30 ಗಂಟೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿದ್ದು 2.9 ರಷ್ಟಿತ್ತು ಎನ್ನಲಾಗಿದೆ.
ಭೂಕಂಪನವಾದ ವರದಿ ಬಹಿರಂಗವಾಗುತ್ತಿದ್ದಂತೆ ಭೂಗರ್ಭಶಾಸ್ತ್ರಜ್ಞರು ತೀವ್ರತೆ ತೀರ ಕಡಿಮೆ ಪ್ರಮಾಣದಲ್ಲಿರುವುದರಿಂದ ಆತಂಕಪಡುವುದು ಬೇಡ ಎಂದು ಸಲಹೆ ನೀಡಿದ್ದಾರೆ.
ಕೆಲ ಗ್ರಾಮದಲ್ಲಿ ಕಂಪನದ ಅನುಭವವಾಗಿರುವುದಾಗಿ ತಿಳಿದುಬಂದಿದೆ. ಭೂಕಂಪನದಿಂದಾಗಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.