ಮಂಗಳೂರು ಗಲಾಟೆ ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಹಿಂದು, ಮುಸ್ಲಿಂ ಸಂಘಟನೆಗಳು ಗಲಾಟೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಬಯಸುತ್ತಿರಬಹುದು. ಉಭಯ ಸಮುದಾಯಗಳ ನಡುವೆ ಸಂಘರ್ಷವಾದಲ್ಲಿ ರಾಜಕೀಯ ಲಾಭಕ್ಕೆ ಪೂರಕವೆಂದು ಕಾಂಗ್ರೆಸ್ ಮುಖಂಡರು ಭಾವಿಸಿರಬಹುದೆಂದು ಲೇವಡಿ ಮಾಡಿದ್ದಾರೆ.
ದೇಶದ್ರೋಹಗಳಿಂದ ದೇಶಭಕ್ತರಿಗೆ ಬೆದರಿಕೆ ಕರೆಗಳು ಬರುತ್ತಿವೆ. ರಾಜ್ಯದಲ್ಲಿ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಗಳಾಗುತ್ತಿವೆ. ಆದಾಗ್ಯೂ ಸಿಎಂ ಸಿದ್ದರಾಮಯ್ಯ ಮೌನಕ್ಕೆ ಶರಣಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಶೇಷವಾಗಿ ಮಂಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ ಹಿಂದುಗಳ ಮೇಲೆ ದೌರ್ಜನ್ಯಗಳಾಗುತ್ತಿವೆ. ಪೊಲೀಸರು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.