Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಅಕ್ರಮ ಸಂಪತ್ತು ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ಎರಡೂವರೆ ವರ್ಷದ ನಂತರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
2019ರಲ್ಲಿ ದಹೆಲಿಯಲ್ಲಿ ಡಿಕೆ ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ದಾಳಿ ಮಾಡಿದ್ದ ಇಡಿ ಕೋಟ್ಯಂತರ ರೂ. ನೋಟು ವಶಪಡಿಸಿಕೊಂಡಿತ್ತು. ಆ ಹಣ ನನ್ನದು ಎಂದು ಡಿಕೆ ಶಿವಕುಮಾರ್ ವಾದಿಸಿದ್ದರು.
ಈ ದಾಳಿ ನಡೆದ ಎರಡೂವರೆ ವರ್ಷಗಳ ನಂತರ ಡಿಕೆ ಶಿವಕುಮಾರ್ ವಿರುದ್ಧ ಸದ್ದಿಲ್ಲದೇ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಚಾರ್ಜ್ ಶೀಟ್ ವಿವರ ಇನ್ನಷ್ಟೇ ಬಹಿರಂಗವಾಗಬೇಕಿದೆ.