ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮತ್ತೆ ಶುರುವಾಗಿದೆ. ಶಾಲೆಗಳು ಪ್ರಾರಂಭವಾಗುತ್ತಿದ್ದಂತೆ ಶಾಲೆ ಹಾಗೂ ಕಾಲೇಜುಗಳಿಂದಲೇ ಕೊರೊನಾ ಸ್ಫೋಟವಾಗುತ್ತಿದೆ. ಹೀಗಾಗಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಶಾಲೆ ಹಾಗೂ ಕಾಲೇಜುಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಲಾಖೆಯ ಪ್ರಧಾನಿ ಕಾರ್ಯದರ್ಶಿಗೆ ಈಗಾಗಲೇ ಅವರು ಪತ್ರ ಬರೆದಿದ್ದಾರೆ.ಡಿ. 9ರಂದು ತಾಂತ್ರಿಕ ಸಲಹಾ ಸಮಿತಿ ತಜ್ಞರು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಕುರಿತು ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ.
ಈಗಾಗಲೇ ಸರ್ಕಾರ ಶಾಲೆಗಳಲ್ಲಿ ಅನುಸರಿಸಬೇಕಾಗಿರುವ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅದರಂತೆ ಶಾಲೆಗಳನ್ನು ನಡೆಸುವಂತೆ ಕಟ್ಟು ನಿಟ್ಟಾಗಿ ಸೂಚಿಸಿದೆ. ಇದರ ಬೆನ್ನಲ್ಲಿಯೇ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸುತ್ತಿದ್ದು, ಸರ್ಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುವುದನ್ನು ಕಾಯ್ದುನೋಡಬೇಕಿದೆ.