Publish Date: Fri, 19 Aug 2022 (18:03 IST)
Updated Date: Fri, 19 Aug 2022 (18:07 IST)
ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ, ಸಿದ್ದರಾಮಯ್ಯ ಅವರು, ವಿರೋಧ ಪಕ್ಷದ ನಾಯಕರಾಗಿದ್ದಾರೆ. ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು, ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಸೇರಿ ಬಿಜೆಪಿಯ ಹಲವು ನಾಯಕರು ಘಟನೆಯನ್ನು ಖಂಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಘಟನೆಯನ್ನ ಖಂಡಿಸಿದ್ರೆ, ವಿಪಕ್ಷ ನಾಯಕರಿಗೆ ಭದ್ರತೆ ಒದಗಿಸ್ತೀವಿ ಎಂದು ಗೃಹ ಸಚಿವರು ಭರವಸೆ ನೀಡಿದ್ದಾರೆ. ಸಚಿವ ಎಸ್.ಟಿ. ಸೋಮಶೇಖರ್ ಮಾತನಾಡಿ, ಅವರೇನು ಮಾತಾಡ್ತಾ ಇದ್ದಾರೆ ಎಂಬುದು ಅವರಿಗೆ ಅರ್ಥ ಆಗ್ತಿಲ್ಲ. ಬರೀ ವಿವಾದಾತ್ಮಕ ಹೇಳಿಕೆಗಳನ್ನೇ ನೀಡ್ತಾರೆ. ಇನ್ಮುಂದಾದ್ರೂ ಅವರು ತೂಕದ ಮಾತಾಡ್ಲಿ ಎಂದು ಚಾಮುಂಡಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದಿದ್ದಾರೆ.