ಮೈಸೂರು ಜಿಲ್ಲೆಯ ನಂಜನಗೂಡು, ಗುಂಡ್ಲುಪೇಟೆಯಲ್ಲಿ ಏ.9 ರಂದು ನಡೆಯಲಿರುವ ಉಪಚುನಾವಣೆಗಾಗಿ ಮೂವರು ವಿಶೇಷ ವೀಕ್ಷಕರನ್ನು ನೇಮಕ ಮಾಡಿ ಕೇಂದ್ರ ಚುನಾವಣೆ ಆಯೋಗ ಆದೇಶ ಹೊರಡಿಸಿದೆ.
ಚುನಾವಣೆ ಪಾರದರ್ಶಕ ಮತ್ತು ಮುಕ್ತವಾಗಿ ನಡೆಯುವಂತಾಗಲು ಮೂವರು ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಚುನಾವಣೆ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ
ಶ್ರೀನಿವಾಸ್ ಪ್ರಸಾದ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ನಂಜನಗೂಡಿನಲ್ಲಿ ಉಪಚುನಾವಣೆ ನಡೆಯುತ್ತಿದ್ದರೆ, ಗುಂಡ್ಲುಪೇಟೆಯಲ್ಲಿ ಮಾಜಿ ಸಚಿವ, ದಿವಂಗತ ಮಹಾದೇವ ಪ್ರಸಾದ್ ನಿಧನದಿಂದ ಉಪಚುನಾವಣೆ ನಡೆಯುತ್ತಿದೆ.
ಉಭಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಚುನಾವಣೆ ಕಣ ರಂಗೇರಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.