ಬೆಂಗಳೂರು : ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಹಿನ್ನಲೆಯಲ್ಲಿ ಇಂದು ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದು.
ಆದರೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದರೂ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಅಂತಿಮ ಆದೇಶದವರೆಗೂ ಪ್ರಕಟಿಸದಂತೆ ಸೂಚಿಸಿದೆ ಎನ್ನಲಾಗಿದೆ.
ಹಾಗೇ ಇಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಹಾಸನ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಹಾಸನ ನಗರಸಭೆಯಲ್ಲಿ ಜೆಡಿಎಸ್ ಬಹುಮತ ಹೊಂದಿದ್ದರೂ ಮೀಸಲಾತಿಯಿಂದಾಗಿ ಅಧ್ಯಕ್ಷ ಸ್ಥಾನ ತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ. ಜೆಡಿಎಸ್ ಸದಸ್ಯರಿಲ್ಲದ ಸಮುದಾಯಕ್ಕೆ ಮೀಸಲಾತಿ ನೀಡಲಾಗಿದೆ. ಹೀಗಾಗಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.