Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸ್ಥಳೀಯ ಸಂಸ್ಥೆಗಳ ಚುನಾವಣೆ: ಆ. 31ರಂದು ಸಾರ್ವತ್ರಿಕ ರಜೆ ಘೋಷಣೆ

ಸ್ಥಳೀಯ ಸಂಸ್ಥೆಗಳ ಚುನಾವಣೆ: ಆ. 31ರಂದು ಸಾರ್ವತ್ರಿಕ ರಜೆ ಘೋಷಣೆ
ಬೆಂಗಳೂರು , ಗುರುವಾರ, 30 ಆಗಸ್ಟ್ 2018 (14:48 IST)
ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಇದೇ ಆಗಸ್ಟ್ 31ರಂದು ನಡೆಯಲಿದೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಆಯಾ ಮತಕ್ಷೇತ್ರಗಳ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ 2018ರ ಆಗಸ್ಟ್ 31ರಂದು ಸಾರ್ವತ್ರಿಕ ರಜೆ ಘೋಷಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನವೀನ ಜೊಸೇಫ್ ಎ ಅವರು ಆದೇಶ ಹೊರಡಿಸಿದ್ದಾರೆ.

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು. ಈ ಆದೇಶವು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಆ್ಯಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ ರಜೆಯಂದು ಘೋಷಿಸಲಾಗಿದೆ ಎಂದು ಅದೇಶದಲ್ಲಿ ತಿಳಿಸಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

31ರಂದು ಪಶು ವಿವಿ ಘಟಿಕೋತ್ಸವ: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಉಪಸ್ಥಿತಿ