ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಘೋಷಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ. ಆದರೆ. ಮುಂದಿನ ಸಿಎಂ ಯಾರಾಗಬೇಕು ಎನ್ನುವುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಸಾಮಾಜಿಕ ಅಂತರ್ಜಾಲ ತಾಣದಲ್ಲಿ ತೊಡಗಿಸಿಕೊಳ್ಳಬೇಕು. ಸರಕಾರದ ಸಾಧನೆಗಳನ್ನು ಮಾಧ್ಯಮಗಳಿಗೆ ವಿವರಿಸಬೇಕು. ಸಾಮಾಜಿಕ ಜಾಲ ತಾಣದಲ್ಲಿರದ ಸಚಿವೆ ಉಮಾಶ್ರೀ ಸೇರಿದಂತೆ ಇತರರನ್ನು ತರಾಟೆಗೆ ತೆಗೆದುಕೊಂಡರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪಾರದರ್ಶಕ ಅಡಳಿತ ನೀಡುವುದರ ಜೊತೆಗೆ ರೈತಪರ, ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಜನಪ್ರಿಯ ಸರಕಾರದ ಸಾಧನೆಗಳನ್ನು ಸಹಿಸದ ವಿಪಕ್ಷಗಳು ಸರಕಾರದ ವಿರುದ್ಧ ಆರೋಪ ಮಾಡುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.