ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದರೂ ಇನ್ನೂ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ಮುಂದುವರಿಸಿದ್ದ ರೈತರು,
ಇದೀಗ ತಮ್ಮ ಧರಣಿಯನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ.
ಕೇಂದ್ರ ಸರ್ಕಾರ ರೈತರ ಎಲ್ಲ ಬೇಡಿಕೆಗಳನ್ನೂ ಈಡೇರಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಅವರು ಆಂದೋಲನ ಮುಕ್ತಾಯ ಮಾಡುತ್ತಿದ್ದಾರೆ. ಇನ್ನು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಒಟ್ಟು 40 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾದ ಐವರು ಸದಸ್ಯರನ್ನೊಳಗೊಂಡ ಸಮಿತಿ ಇಂದು ಬೆಳಗ್ಗೆ 10 ಗಂಟೆಗೆ ತುರ್ತು ಸಭೆ ಕರೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಈ ಸಭೆಯ ಬಳಿಕ ರೈತ ಸಂಘಟನೆಗಳು ತಮ್ಮ ಪ್ರತಿಭಟನೆ ಮುಕ್ತಾಯಗೊಳಿಸುವ ಬಗ್ಗೆ ಘೋಷಣೆ ಮಾಡುತ್ತಾರೆ ಎಂದು ಹೇಳಲಾಗಿದೆ.