Publish Date: Sunday, 11 September 2022 (16:26 IST)
Updated Date: Sunday, 11 September 2022 (16:29 IST)
ಬಸವರಾಜ ಬೊಮ್ಮಾಯಿ ಸರಕಾರದ ಒಂದು ವರ್ಷದ ಸಾಧನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮ ಫೇಲ್ ಆಯಿತೇ?. ಖಾಲಿ ಕುರ್ಚಿಯಿರುವ ಇಮೇಜ್/ ವಿಡಿಯೋಗಳನ್ನು ಕೆಪಿಸಿಸಿಯ ಸಾಮಾಜಿಕ ಘಟಕ ಮುಂದಿಟ್ಟುಕೊಂಡು ಲೇವಡಿ ಮಾಡುತ್ತಿದೆ.
ಖಾಲಿ ಕುರ್ಚಿಯನ್ನು ಉದ್ದೇಶಿಸಿ ಮಾತನಾಡಿದ್ದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಾಧನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಕಾರ್ಯಕ್ರಮಕ್ಕೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಂ ಆಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿದ್ದಾರೆ.
ಕೆಪಿಸಿಸಿಯ ಸಾಮಾಜಿಕ ಜಾಲತಾಣ ಈ ಬಗ್ಗೆ ಸಾಲುಸಾಲು ಟ್ವೀಟ್ ಗಳನ್ನು ಮಾಡಿದ್ದು, ನಲವತ್ತು ಪರ್ಸೆಂಟ್ ವಿಚಾರವನ್ನು ಮುಂದಿಟ್ಟುಕೊಂಡು ಟೀಕಿಸಿದೆ.