Webdunia - Bharat's app for daily news and videos

Install App

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

Webdunia
ಸೋಮವಾರ, 30 ಜನವರಿ 2023 (19:58 IST)
ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಾಗಿದ್ದು, *ಇಂದು ಚಿನ್ನಪ್ಪನಹಳ್ಳಿ ಹಾಗೂ ಸಾದರಮಂಗಳ ಸೇರಿದಂತೆ ಒಟ್ಟು 4 ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.  ದೊಡ್ಡಾನೆಕುಂದಿ ವಾರ್ಡ್ನ ಚಿನ್ನಪ್ಪನಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ 3 ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದು, ಜಿ+2 ಕಟ್ಟಡವನ್ನು ಈಗಾಗಲೇ ನೆಲಸಮಗೊಳಿಸಲಾಗಿದೆ. ಇನ್ನೆರಡು ಕಟ್ಟಡಗಳ ತೆರವು ಕಾರ್ಯಾಚರಣೆಯು ಪ್ರಗತಿಯಲ್ಲಿದ್ದು, ನಾಳೆ ಬಾಕಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಿದೆ. ಇನ್ನು ಹೂಡಿ ವಾರ್ಡ್ ಸಾದರ ಮಂಗಳ ವ್ಯಾಪ್ತಿಯಲ್ಲಿ ರಾಜಕಾಲುವೆ ಭಾಗದಲ್ಲಿ ಒತ್ತುವರಿ ಮಾಡಿಕೊಂಡಿದ್ದ ಸುಮಾರು 8 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ಇಂದು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆಯ ವೇಳೆ 1 ಹಿಟಾಚಿ, 1 ಜೆಸಿಬಿ, 1 ಗ್ಯಾಸ್ ಕಟರ್, 1 ಟ್ರ್ಯಾಕ್ಟರ್, 10 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಸ್ಥಳದಲ್ಲಿ ಪಾಲಿಕೆಯ ಇಂಜಿನಿಯರ್ ಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments